ಭೋಪಾಲ್(ಏ.30): ಮಧ್ಯಪ್ರದೇಶದ ಗುನಾ ಲೋಕಸಭಾ ಕ್ಷೇತ್ರದ BSP ಅಭ್ಯರ್ಥಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಈ ಬೆಳವಣಿಗೆಯಿಂದ BSP ಮುಖ್ಯಸ್ಥೆ ಮಾಯಾವತಿ ಕಾಂಗ್ರೆಸ್ ಮೇಲೆ ಸಿಟ್ಟಾಗಿದ್ದಾರೆ.

ಗುನಾ ಲೋಕಸಭಾ ಕ್ಷೇತ್ರದ BSP-SP ಮೈತ್ರಿ ಅಭ್ಯರ್ಥಿ ಲೋಕೇಂದ್ರ ಸಿಂಗ್ ರಾಜಪೂತ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಅಲ್ಲದೇ ಇದೇ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಈ ಬೆಳವಣಿಗೆಯಿಂದ ಇಕ್ಕಟ್ಟಿಗೆ ಸಿಲುಕಿರುವ BSP ಮುಖ್ಯಸ್ಥೆ ಮಾಯಾವತಿ, ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂಪಡೆಯುವ ಬೆದರಿಕೆವೊಡ್ಡಿದ್ದಾರೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಯಾವತಿ ಹರಿಹಾಯ್ದಿದ್ದಾರೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ