ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಾಗೂ ಕೊನೆಯ ಹಂತದ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ವಾಕ್ಸಮರ, ಟೀಕಾಪ್ರಹಾರಗಳೊಂದಿಗೆ ತೆರೆ ಬಿದ್ದಿದ್ದು, ಮಂಗಳವಾರ 14 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಬಹಿರಂಗ ಪ್ರಚಾರ ಅಂತ್ಯಗೊಂಡ ಬಳಿಕ ಅಭ್ಯರ್ಥಿಗಳನ್ನು ಹೊರತುಪಡಿಸಿ ರಾಜಕೀಯ ಪಕ್ಷಗಳ ಮುಖಂಡರು ಕ್ಷೇತ್ರ ದಿಂದ ಹೊರಹೋ ಗಿದ್ದು, ಸೋಮವಾರ ಅಭ್ಯ ರ್ಥಿಗಳು ಮನೆ- ಮನೆ ಪ್ರಚಾರ ಕೈಗೊಳ್ಳ ಲಿದ್ದಾರೆ. ಮಂಗಳವಾರ ರಾಜ್ಯದ ಅಂತಿಮ ಹಂತದ ಮತದಾನ ವನ್ನು ಶಾಂತಿಯು ತವಾಗಿ ನಡೆಸಲು ಚುನಾವವಣಾ ಆಯೋಗವು ಸಕಲ ರೀತಿಯಲ್ಲಿ ಸಿದ್ಧತೆ ಕೈಗೊಂಡಿದೆ. 

ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮತ ದಾರರು ತಮ್ಮ ಹಕ್ಕು ಚಲಾಯಿಸಿ ಪ್ರಜಾ ಪ್ರಭುತ್ವ ಹಬ್ಬವನ್ನು ಯಶಸ್ವಿಗೊಳಿಸುವಂತೆ ಚುನಾವಣಾ ಆಯೊಗವು ಮನವಿ ಮಾಡಿಕೊಂಡಿದೆ. 

ಎರಡನೇ ಹಂತದಲ್ಲಿ ನಡೆಯುವ 14 ಲೋಕಸಭಾ ಕ್ಷೇತ್ರದಲ್ಲಿ 2.43 ಕೋಟಿ ಜನರು 237 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ, ಕೇಂದ್ರ ಸಚಿವರಾದ ಅನಂತಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ, ಮೈತ್ರಿಕೂಟದ ಅಭ್ಯರ್ಥಿಗಳಾದ ಮಧು ಬಂಗಾರಪ್ಪ, ಕಾಂಗ್ರೆಸ್‌ನ ವಿ.ಎಸ್.ಉಗ್ರಪ್ಪ ಸೇರಿದಂತೆ 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 

ಈ ಪೈಕಿ 227 ಪುರುಷರು ಮತ್ತು 10 ಮಹಿಳಾ ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಚುನಾವಣೆಗೆ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಮೊದಲು ರಾಜಕೀಯ ಪಕ್ಷಗಳ ಮುಖಂಡರು ಪಕ್ಷದ ಅಭ್ಯರ್ಥಿಗಳ ಪರ ಮನವೊಲಿಕೆಯ ಅಂತಿಮ ಪ್ರಯತ್ನ ನಡೆಸಿದರು.  ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರು ಪ್ರಚಾರ ನಡೆಸಿದರು.