ಕೋಲ್ಕತ್ತಾ(ಮೇ.10): ಪ.ಬಂಗಾಳದ ಬಿಜೆಪಿ ಸ್ಟಾರ್ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಅವರ ಕಾರಿನಲ್ಲಿ ಹಣ ಪತ್ತೆಯಾಗಿದೆ.

ಇಲ್ಲಿನ ಘಟಾಲ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಕಾರಿನಿಂದ 1.13 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. 

ಭಾರತಿ ಘೋಷ್ ಅವರ ಕಾರನ್ನು ಪಿಂಗಳ ಪ್ರದೇಶದಲ್ಲಿ ತಪಾಸಣೆಗೊಳಪಡಿಸಿದಾಗ ಕಾರಿನಲ್ಲಿ  1.13 ಲಕ್ಷ ರೂ. ನಗದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಈ ಹಣದ ಮೂಲ ತಿಳಿಸುವಲ್ಲಿ ಭಾರತಿ ಘೋಷ್ ವಿಫಲರಾಗಿದ್ದು, ತನಿಖೆ ನಡೆಸುವುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈಗಾಗಲೇ ಘೋಷ್ ಅವರನ್ನು ವಿಚಾರಣೆ ನಡೆಸಲಾಗಿದ್ದು, ಭಾರತಿ ಘೋಷ್ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ