ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಭೋವಿ ಸಮಾಜದವರಿಗೆ ಬಿಜೆಪಿಯಿಂದ ಟಿಕೆಟ್ ನೀಡದಿದ್ದರೆ ಸಮಾಜದ ಹಿತದೃಷ್ಟಿಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಸಮಾಜ ಹಾಗೂ ಸ್ವಾಮೀಜಿಯವರ ಗೌರವ ಉಳಿಸಲು ಅವರ ಸೂಚನೆ ಪಾಲಿಸಲಾಗುವುದು. ಶ್ರೀಗಳು ಹೇಳಿದರೆ ರಾಜೀನಾಮೆ ಸಲ್ಲಿಸಲಾಗುವುದು ಎಂದು ಶಾಸಕರಾದ ಗೂಳಿಹಟ್ಟಿ ಶೇಖರ್ ಹಾಗೂ ಎಂ. ಚಂದ್ರಪ್ಪ ತಿಳಿಸಿದ್ದಾರೆ. 

ಬುಧವಾರ ರಾತ್ರಿ ಭೋವಿ ಗುರುಪೀಠದಲ್ಲಿ ಸಮಾಜದ ಮುಖಂಡರ ಸಭೆ ಕರೆದಿದ್ದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸದಾಶಿವ ಆಯೋಗದ ವರದಿ ವಿರೋಧಿಸುವ ನಿಟ್ಟಿನಲ್ಲಿ ಸಮು ದಾಯದ ಒಬ್ಬರನ್ನು ಪಾರ್ಲಿಮೆಂಟ್‌ಗೆ ಕಳಿಸಬೇಕಾಗಿದೆ.

ಅಧಿಕಾರವನ್ನು ನೆಚ್ಚಿ ಯಾರೂ ಕುಳಿತುಕೊಳ್ಳಬಾರದು. ಸಮುದಾಯದ ಹಿತ ಕಾಯಲು ಬದ್ಧರಾಗಿರಬೇಕು. ಸಂದರ್ಭ ಸಮಾ ಜದ ಶಾಸಕರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕರೆ ನೀಡಿದ್ದರು. 

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಶಾಸಕದ್ವಯರಿಬ್ಬರು, ಶ್ರೀಗಳ ಹೇಳಿಕೆಯಂತೆ ಸಮಾಜದ ಹಿತಕಾಯಲು ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ಸಿದ್ಧರಿದ್ದೇವೆ ಎಂದಿದ್ದಾರೆ. ಈ ನಡುವೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಗೊಂಡಿದ್ದು, ಆನೇಕಲ್ ನಾರಾಯಣ ಸ್ವಾಮಿಗೆ ಟಿಕೆಟ್ ಸಿಕ್ಕಿದೆ. ಇದೀಗ ಶಾಸಕರು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ