Asianet Suvarna News Asianet Suvarna News

ಮಂಡ್ಯ JDS ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚಿತ್ರ ನಿಷೇಧಿಸಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ  ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. 

Complaint Against Mandya JDS Candidate Nikhil Kumaraswamy In Election Commission
Author
Bengaluru, First Published Mar 20, 2019, 12:46 PM IST

ಬೆಂಗಳೂರು : ಅತ್ತ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ನಾಮಪತ್ರ ಸಲ್ಲಿಸುತ್ತಿದ್ದಂತೆ, ಇತ್ತ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ದೂರೊಂದು ದಾಖಲಾಗಿದ್ದು, ನಿಖಿಲ್ ಚಿತ್ರಗಳು ಪ್ರದರ್ಶನಗೊಳ್ಳಬಾರದೆಂದು ಆಗ್ರಹಿಸಲಾಗಿದೆ.

ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ, ಸ್ಯಾಂಡಲ್‌ವುಡ್ ನಟರಾದ ಯಶ್ ಹಾಗೂ ದರ್ಶನ್ ಸುಮಲತಾ ಅವರನ್ನು ಬೆಂಬಲಿಸಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಇದೇ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ನಟಿಸಿರುವ ಯಾವುದೇ ಚಿತ್ರಗಳೂ ಪ್ರದರ್ಶನಗೊಳ್ಳಬಾರದೆಂದೂ ಚುನಾವಣಾ ಆಯೋಗಕ್ಕೆ ಆಗ್ರಹಿಸಿ,ಮನವಿ ಸಲ್ಲಿಸಲಾಗಿದೆ.

ಕರ್ನಾಟಕ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ನಾಗೇಶ್ ಗೌಡರಿಂದ ನಿಖಿಲ್ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಮಂಡ್ಯ ಲೋಕಾಸಭೆಯ ಜೆಡಿಎಸ್ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಸಿನಿಮಾಗಳನ್ನು ಯಾವುದೇ ಚಿತ್ರಮಂದಿರದಲ್ಲಿ ಪ್ರದರ್ಶಿಸದಂತೆ ಆಗ್ರಹಿಸಲಾಗಿದೆ.

ನಿಖಿಲ್ ಕುಮಾರಸ್ವಾಮಿ ಪರವಾಗಿ ಯಾವುದೇ ಜಾಹೀರಾತುಗಳನ್ನೂ ಪ್ರದರ್ಶಿಸದಂತೆ ನಿರ್ಬಂಧಿಸಲು ಕರ್ನಾಟಕ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರಿಗೆ ನೀಡಿರುವ ಅರ್ಜಿಯಲ್ಲಿ ಕೋರಲಾಗಿದೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ

Follow Us:
Download App:
  • android
  • ios