ಮೈಸೂರು[ಮಾ.26]: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಂಸದ ಸಿ.ಎಚ್‌. ವಿಜಯಶಂಕರ್‌ ಸೋಮವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ: ಸಂಸದ ಪ್ರತಾಪ್ ಸಿಂಹ ಆಸ್ತಿ ವಿವರ ಬಹಿರಂಗ!

ಮೈಸೂರು ಕ್ಷೇತ್ರದಲ್ಲಿ ಈ ಹಿಂದೆ ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಜಯ ಸಾಧಿಸಿದ್ದ ಸಿ.ಎಚ್‌. ವಿಜಯಶಂಕರ್‌, ಕಳೆದ ಬಾರಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ವಿಜಯಶಂಕರ್‌ ಈ ಬಾರಿ ಕಾಂಗ್ರೆಸ್‌- ಜೆಡಿಎಸ್‌ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

ಸಾಂಪ್ರದಾಯಿಕ ಎದುರಾಳಿಗಳಿಲ್ಲದ ಕ್ಷೇತ್ರದಲ್ಲಿ ‘ಸಿಂಹ’ ಬಲವೇನು..?

ನಾಮಪತ್ರ ಸಲ್ಲಿಸುವ ಮುನ್ನ ಚಾಮುಂಡಿಬೆಟ್ಟಕ್ಕೆ ಕುಟುಂಬ ಸಮೇತ ತೆರಳಿದ ವಿಜಯಶಂಕರ್‌ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮೊದಲಾದವರೊಂದಿಗೆ ಪೂಜೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ದಿನವೇ 'ಸಿಂಹ'ಗೆ ಆಘಾತ

2.5 ಕೋಟಿ ಆಸ್ತಿ ಒಡೆಯ

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಸಿ.ಎಚ್‌. ವಿಜಯಶಂಕರ್‌ಗೆ 2.15 ಕೋಟಿ ಸ್ಥಿರಾಸ್ತಿ ಇದೆ. ಬ್ಯಾಂಕ್‌ನಲ್ಲಿ 34,12,974 ನಗದು ಇದೆ. ಕೈಯಲ್ಲಿ .2 ಲಕ್ಷ ನಗದು ಇದೆ. ಪತ್ನಿ ವಿ.ಎಚ್‌. ಬಬಿತಾ ಅವರ ಕೈಯಲ್ಲಿ 15 ಸಾವಿರ ನಗದು, ಬ್ಯಾಂಕ್‌ನಲ್ಲಿ ಚಿನ್ನಾಭರಣ ಮತ್ತು ನಗದು ಸೇರಿ .1.96 ಕೋಟಿ ಮೌಲ್ಯದ ಆಸ್ತಿ ಇದೆ. 10 ಲಕ್ಷ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ