ಮುಂಬೈ :  ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಪರ್ವಜೋರಾಗಿದೆ. ಕಾಂಗ್ರೆಸ್ ನಾಯಕಿಯೋರ್ವರು ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. 

ಬೃಹನ್ ಮುಂಬೈ ಮಹಾನಗರ ಪಾಲಿಗೆ ಮಾಜಿ ವಿಪಕ್ಷ ಮಾಜಿ ನಾಯಕಿ ಹಾಗೂ ಕಾಂಗ್ರೆಸ್ ಮುಖಂಡೆ ಪ್ರವೀನ್ ಚೆಡ್ಡಾ  ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ನೇತೃತ್ವದಲ್ಲಿ ಪಕ್ಷ ಸೇರಿದ್ದು, ಗುಜರಾತಿ ನಾಯಕಿ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟು ಬಲ ಬಂದಂತಾಗಿದೆ. 

ಮುಂಬೈ ನ ಒಟ್ಟು ಜನಸಂಖ್ಯೆಯಲ್ಲಿ ಶೇ.18 ರಿಂದ 20ರಷ್ಟು ಗುಜರಾತಿ ಜನಸಂಖ್ಯೆ ಇದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯತ್ತ ಹೆಚ್ಚಿನ  ಮತಗಳನ್ನು ಸೆಳೆಯಲು ಅನುಕೂಲವಾಗಲಿದೆ. 

ಸದ್ಯ ರಾಜ್ಯದಲ್ಲಿ ಇಬ್ಬರು ಗುಜರಾತಿ ಸಮುದಾಯದ ಶಾಸಕರಿದ್ದು,  ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ 20 ಗುಜರಾತಿ ಮುಖಂಡರಿದ್ದಾರೆ. 

ಇತ್ತೀಚಿನ ದಿನಗಳಲ್ಲಿ ಗುಜರಾತಿ ಸಮುದಾಯದ ಮತಗಳು ಬಿಜೆಪಿಯತ್ತ ಒಲಿಯುತ್ತಿದ್ದು , 2017ರ ಬೃಹತ್ ಮುಂಬೈ ಮಹಾನಗರ ಪಾಲಿಕೆ  ಚುನಾವಣೆಯಲ್ಲಿ 82 ಸ್ಥಾನ ಪಡೆದುಕೊಂಡಿತ್ತು.

2012ರ ಚುನಾವಣೆಯಲ್ಲಿ ಕೇವಲ 32 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ 2017ರಲ್ಲಿ ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಿತ್ತು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ