Asianet Suvarna News Asianet Suvarna News

ನೀತಿ ಸಂಹಿತೆ ಉಲ್ಲಂಘನೆ: ಮೋದಿ-ಶಾ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

ಪ್ರಧಾನಿ-ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ| ಮೋದಿ-ಶಾ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ| ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್| ಪ್ರಚಾರದಲ್ಲಿ ಮಿಲಿಟರಿ ಕಾರ್ಯಾಚರಣೆ ಪ್ರಸ್ತಾಪದ ಆರೋಪ|

Congress Goes To Supreme Court  Against PM Modi and Amit Sha
Author
Bengaluru, First Published Apr 29, 2019, 4:26 PM IST

ನವದೆಹಲಿ(ಏ.29): ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಆರೋಪ ಮಾಡಿರುವ ಕಾಂಗ್ರೆಸ್, ಈ ಕುರಿತು ಕ್ರಮಕ್ಕಾಗಿ ಆಗ್ರಹಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಪದೇ ಪದೇ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದರೂ ಚುನಾವಣಾ ಆಯೋಗ ಪ್ರಧಾನಿ ಮತ್ತು ಅಮಿತ್ ಶಾ ವಿರುದ್ದ ಯಾವುದೇ ಕ್ರಮ ಕೈಗೊಳ್ಳುತ್ತಿಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಇಬ್ಬರೂ ನಾಯಕರು ಮಿಲಿಟರಿ ಕಾರ್ಯಾಚರಣೆಯನ್ನು ಪ್ರಚಾರಕ್ಕಾಗಿ ಬಳಸಿಕೊಂಡಿದ್ದು, ದೂರುಗಳ ಹೊರತಾಗಿಯೂ ಆಯೋಗವು ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಮೋದಿ-ಶಾ ವಿಚಾರವಾಗಿ ಚುನಾವಣಾ ಆಯೋಗ ನಿಷ್ಕ್ರೀಯವಾಗಿದ್ದು, ಪ್ರಧಾನಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಇನ್ನು ಕಾಂಗ್ರೆಸ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ನಡೆಸಲಿದೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು, ಏ.23ರಂದು ಎರಡನೇ ಹಂತದ ಮತದಾನ ಮುಕ್ತಾಯ ಕಂಡಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.

Follow Us:
Download App:
  • android
  • ios