ಬೋಪಾಲ್‌[ಮಾ.24]: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ಸಿಗ ದಿಗ್ವಿಜಯ್‌ ಸಿಂಗ್‌ ಅವರು ಭೋಪಾಲ್‌ ಬಿಜೆಪಿಯ ಭದ್ರಕೋಟೆ ಎಂದೇ ಹೇಳಲಾಗುವ ಭೋಪಾಲ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ಕಾಂಗ್ರೆಸ್‌ ಇಲ್ಲಿ ಶನಿವಾರ ಏರ್ಪಡಿಸಿದ್ದ ಹೋಲಿ ಮಿಲಾನ್‌ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶ ಸಿಎಂ ಕಮಲ್‌ನಾಥ್‌ ಅವರು ಘೋಷಣೆ ಮಾಡಿದ್ದಾರೆ. ಒಂದು ವಾರದ ಹಿಂದಷ್ಟೇ ದಿಗ್ವಿಜಯ್‌ ಸಿಂಗ್‌ ಅವರು ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರೆ, ಅವರು ಕಠಿಣ ಕ್ಷೇತ್ರದಿಂದ ಆಯ್ಕೆಯಾಗಬೇಕು ಎಂದು ಸಿಎಂ ಕಮಲ್‌ನಾಥ್‌ ಅವರು ಸವಾಲು ಹಾಕಿದ್ದರು.

ಈ ಸವಾಲನ್ನು ಸ್ವೀಕರಿಸಿರುವ ದಿಗ್ವಿಜಯ್‌ ಸಿಂಗ್‌ ಅವರು, 1989ರಿಂದಲೂ ಬಿಜೆಪಿಯ ಹಿಡಿತದಲ್ಲಿರುವ ಭೋಪಾಲ್‌ ಕ್ಷೇತ್ರದಿಂದ ಸ್ಪರ್ಧೆಗೆ ನಿರ್ಧರಿಸಿದ್ದಾರೆ.