ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಇದೀಗ ಕಾಂಗ್ರೆಸ್ ಮುಖಂಡರೋರ್ವರು ಬಿಜೆಪಿ ನಾಯಕ ಯಡಿಯೂರಪ್ಪ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ಯಾದಗಿರಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು, ಇದೀಗ ಯಾದಗಿರಿ ಕಾಂಗ್ರೆಸ್ ಮುಖಂಡ ಪಕ್ಷಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಮಾಲಕರೆಡ್ಡಿ ಪಕ್ಷ ತೊರೆಯಲು ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಬಿ.ಎಸ್ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ಮಾರ್ಚ್ 22 ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷಕ್ಕೆ ಮಾಲಕರೆಡ್ಡಿ ಸೇರ್ಪಡೆಯಾಗಲಿದ್ದಾರೆ. 

ಇನ್ನು ಇದೇ ವೇಳೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗಲು ಸೂಕ್ತ ಅಭ್ಯರ್ಥಿಯಲ್ಲ ಎಂದಿರುವ ಮಾಲಕರೆಡ್ಡಿ, ದೇಶದ ಹಿತದೃಷ್ಟಿಯಿಂದ ಪ್ರಧಾನಿ ಸ್ಥಾನಕ್ಕೆ ಮೋದಿ ಅವರೇ ಸೂಕ್ತ ಅಭ್ಯರ್ಥಿ ಎಂದಿದ್ದಾರೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ