ಹೈದ್ರಾಬಾದ್ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಹಲವು ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ. 

ಈಗಾಗಲೇ ತೆಲಂಗಾಣದಲ್ಲಿ ಕೆಲ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತೊರೆದು ಟಿಆರ್ ಎಸ್ ಸೇರ್ಪಡೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ವಿಪಕ್ಷ ಸ್ಥಾನಕ್ಕೂ ಕುತ್ತು ಎದುರಾಗುತ್ತಿದೆ. 

ಕಳೆದ ಕೆಲ ದಿನಗಳ ಹಿಂದಷ್ಟೇ ಕೆಲವು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಇದೀಗ ಈ ಸಾಲಿಗೆ ಇನ್ನೋರ್ವ ಶಾಸಕ ಸೇರಿದ್ದಾರೆ. 

ಕೊಲ್ಲಾಪುರ ಕಾಂಗ್ರೆಸ್ ಶಾಸಕ ಹರ್ಷವರ್ಧನ್ ರೆಡ್ಡಿ ಕಾಂಗ್ರೆಸ್ ತೊರೆದು ಟಿಆರ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಅಇಆರ್ ಎಸ್ ಮುಖಂಡ ಕೆ.ಟಿ ರಾಮರಾವ್ ಅವರನ್ನು ಭೇಟಿಯಾದ ರೆಡ್ಡಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.

ಇದರಿಂದ ಸದ್ಯ ಟಿಆರ್ ಎಸ್ ಬೆಂಬಲಿಗರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ.  ಕಳೆದ ಡಿಸೆಂಬರ್ ತಿಂಗಳಲ್ಲಿ ಟಿಆರ್ ಎಸ್ ಮುಖಂಡ ಚಂದ್ರಶೇಖರ್ ರಾವ್ ವಿಧಾನಸಭೆ ವಿಸರ್ಜನೆ ಮಾಡಿದ್ದ ವೇಳೆ 119 ಇದ್ದ ಸದ್ಯಬಲ ಚುನಾವಣೆ ಬಳಿಕ 88 ಆಗಿತ್ತು. 

19 ಸದಸ್ಯಬಲವಿದ್ದ ಕಾಂಗ್ರೆಸ್ ನಲ್ಲಿ ಈಗಾಗಲೇ 9 ಮಂದಿ ಟಿಆರ್ ಎಸ್  ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಪಕ್ಷದ ಮುಖಂಡರು ತಮ್ಮ ಸಂಪರ್ಕದಲ್ಲಿರುವುದಾಗಿ ಟಿಆರ್ ಎಸ್ ಮುಖಂಡರು ಹೇಳಿದ್ದಾರೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ