ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ| ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ರಾಹುಲ್| ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ಮುಂದಾದ ರಾಹುಲ್| ರಾಹುಲ್ ಇಂಗಿತಕ್ಕೆ ವಿರೋಧ ವ್ಯಕ್ತಪಡಿಸಿದ ಸೋನಿಯಾ ಗಾಂಧಿ| ರಾಜೀನಾಮೆ ನೀಡದೇ ಪಕ್ಷದ ಬಲವರ್ಧನೆಗೆ ಮುಂದಾಗುವಂತೆ ಸಲಹೆ|
ನವದೆಹಲಿ(ಮೇ.23): ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸೋಲಿನ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮಗೆ ಮುಂದಾಗಿದ್ದು, ತಾಯಿ ಹಾಗೂ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜೀನಾಮೆ ನೀಡಕೂಡದು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ರಾಹುಲ್ ಇಂಗಿತಕ್ಕೆ ವಿರೋಧ ವ್ಯಕ್ತಪಡಿಸಿದ ಸೋನಿಯಾ ಗಾಂಧಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದೇ ಪಕ್ಷ ಬಲವರ್ಧನೆಗೆ ಮತ್ತಷ್ಟು ಹೆಚ್ಚು ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದ ರಾಜಕೀಯ ಚಿತ್ರಣ

