ಬೆಂಗಳೂರು(ಮಾ. 3231  ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪರ್ವದ ಪರಿವರ್ತನಾ ಸಮಾವೇಶ  ಸಂಜೆ 4 ಗಂಟೆಗೆ ಬೆಂಗಳೂರು ಹೊರವಲದ ಮಾದವಾರದ ಬಿಐಇಸಿ ಮೈದಾನ ನೈಸ್ ಜಂಕ್ಷನ್ ನಲ್ಲಿ ನಡೆಯಲಿದ್ದು ವಿವಿಧ ಕಡೆಯಿಂದ ಜನರು ಆಗಮಿಸುತ್ತಿದ್ದು ಟ್ರಾಫಿಕ್ ಜಾಮ್ ಆಗಿದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸೇರಿದಂತೆ ಮೈತ್ರಿ ಪಕ್ಷಗಳ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ರಾಹುಲ್ ಗಾಂಧಿಗೆ 10 ಪ್ರಶ್ನೆ ಕೇಳಿ ಕಾಲೆಳೆದ ಬಿಜೆಪಿ

ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಹರಸಾಹಸ ಪಡಬೇಕಾಗಿದೆ. ಮಾರ್ಗದ ಉದ್ದಕ್ಕೂ ಟ್ರಾಫಿಕ್ ಜಾಮ್ ಆಗಿದ್ದು ಸಂಜೆಯವರೆಗೆ ಈ ಮಾರ್ಗದ ಬದಲು ಬೇರೆ ರಸ್ತೆ ಬಳಸುವುದು ಉತ್ತಮ.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.