ನವದೆಹಲಿ(ಮೇ.30): ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್, ಒಂದು ತಿಂಗಳುಗಳ ಕಾಲ ಯಾವುದೇ ಸುದ್ದಿವಾಹಿನಿಯ ಚರ್ಚೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ.

ಚುನಾವಣಾ ಸೋಲು ಮತ್ತು ರಾಹುಲ್ ಗಾಂಧಿ ರಾಜೀನಾಮೆ ವಿಚಾರ ಪಕ್ಷದಲ್ಲಿ ಗೊಂದಲ ಸೃಷ್ಟಿಸಿದ್ದು, ಆಂತರಿಕ ಗೊಂದಲ ಬಗೆಹರಿಯುವವರೆಗೂ ಯಾವುದೇ ಸುದ್ದಿವಾಹಿನಿಯಲ್ಲಿ ನಡೆಯುವ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಈ ಕುರಿತು ಟ್ವಿಟ್ ಮೂಲಕ ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ಚರ್ಚೆಗಳಲ್ಲಿ ಕಾಂಗ್ರೆಸ್ ವಕ್ತಾರರನ್ನು ಕರೆಯದಿರುವುದಂತೆ ಎಲ್ಲಾ ಸುದ್ದಿವಾಹಿನಿಗಳ ಮುಖ್ಯಸ್ಥರಿಗೆ ಮನವಿ ಮಾಡಿದ್ದಾರೆ.