ಬೆಂಗಳೂರು(ಏ.08)  ಅಯೋಧ್ಯೆ ರಾಮ ಮಂದಿರ ವಿಚಾರ ನ್ಯಾಯಾಲಯದಲ್ಲಿದೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ಹೆಸರಿನೊಂದಿಗೆ ರಾಮಮಂದಿರ ಉಲ್ಲೇಖ ಮಾಡಿದ್ದಾರೆ.

'ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ.  ಮೋದಿ ಅವರೇ, ಇನ್ನೆಷ್ಟು ಕಾಲ ಜನರ ಭಾವನೆಗಳನ್ನೇ ಬಂಡವಾಳ ಮಾಡಿಕೊಂಡು ಮೋಸ ಮಾಡುತ್ತೀರ? 5 ವರ್ಷದಲ್ಲಿ ಒಮ್ಮೆಯಾದರೂ ಮಂದಿರ ನೆನಪಾಗಿರಲಿಲ್ಲವೇ?' 

ಈ ಕ್ಷೇತ್ರದಲ್ಲಿ ಸಾಮಾನ್ಯ ಚುನಾವಣೆಗಿಂತ 15 ಕೋಟಿ ಅಧಿಕ ಖರ್ಚು!

ಹೀಗೆಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ ಮೋದಿ ಮತ್ತು ಬಿಜೆಪಿಯನ್ನು ರಾಮಮಂದಿರದ ಹೆಸರಿನಲ್ಲಿ ಟೀಕಿಸಿದ್ದಾರೆ.