ಜೈಪುರ: ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಗೆಲುವಿನ ಭವಿಷ್ಯ ನುಡಿದಿರುವ ಬೆನ್ನಲ್ಲೇ, ಲೋಕಸಭೆ ಚುನಾವಣೆಯ ಫಲಿತಾಂಶ ಏನೇ ಬಂದರೂ ಅದನ್ನು ನಾವು ವಿಧೇಯತೆಯಿಂದ ಒಪ್ಪಿಕೊಳ್ಳುವುದಾಗಿ ಹಿರಿಯ ಕಾಂಗ್ರೆಸ್ಸಿಗ, ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಹೇಳಿದ್ದಾರೆ. 

ಅವರ ಈ ಹೇಳಿಕೆ ಫಲಿತಾಂಶ ಪ್ರಕಟಕ್ಕೂ ಮುನ್ನವೇ ಕಾಂಗ್ರೆಸ್‌ ಸೋಲೊಪ್ಪಿಕೊಂಡಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ. 

ಚುನಾವಣೋತ್ತರ ಸಮೀಕ್ಷೆಗಳು, ರಾಜಸ್ಥಾನದಲ್ಲೂ ಬಿಜೆಪಿ ಕ್ಲೀನ್‌ಸ್ವೀಪ್‌ ಮಾಡಲಿದೆ ಎಂದು ಹೇಳಿವೆ. ಅದರ ಬೆನ್ನಲ್ಲೇ ಗೆಹ್ಲೋಟ್‌ ಈ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.