ಚಾಮರಾಜನಗರ : ಚಾಮರಾಜನಗರದಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿರುವ ಹಾಲಿ ಸಂಸದ ಆರ್.ಧ್ರುವ ನಾರಾಯಣ ವಿರುದ್ಧ ಮಾಜಿ ಸಂಸದ, ಹಿರಿಯ ನಾಯಕ ವಿ.ಶ್ರೀನಿವಾಸಪ್ರಸಾದ್ ಅವರು ಬಿಜೆಪಿ ಯಿಂದ ಸ್ಪರ್ಧೆಗಿಳಿರುವುದರಿಂದ ಕಣ ರಂಗೇರಿದೆ.

ಇವರ ನಡುವೆ ಬಿಎಸ್ಪಿಯಿಂದ ಡಾ.ಶಿವಕುಮಾರ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಹಾಲಿ ಸಂಸದ ಧ್ರುವನಾರಾಯಣ 6 ತಿಂಗಳಿಂದಲೇ ಪ್ರಚಾರ ನಡೆಸುತ್ತಿದ್ದಾರೆ. 

ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸಪ್ರಸಾದ್ ಮತ್ತು ಬಿಎಸ್ಪಿ ಅಭ್ಯರ್ಥಿ ಡಾ.ಶಿವಕುಮಾರ್ ಸಹ ವಿಧಾನಸಭಾ ಮಟ್ಟದಲ್ಲಿ ಸಭೆ ನಡೆಸುವ ಮೂಲಕ ಪ್ರಚಾರ ಆರಂಭಿಸಿದ್ದಾರೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ