ಕಾಂಗ್ರೆಸ್‌ನಿಂದ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಮೊಯ್ಲಿ
ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ
ಚಿಕ್ಕಬಳ್ಳಾಪುರ : ಕಾಂಗ್ರೆಸ್‌ನಿಂದ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ವೀರಪ್ಪ ಮೊಯ್ಲಿ ಹಾಗೂ ಕಳೆದ ಬಾರಿ ಅತ್ಯಲ್ಪ ಅಂತರದಿಂದ ಪರಾಭವಗೊಂಡಿರುವ ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ನಡುವೆ ನೇರ ಹಣಾಹಣಿಯಿದೆ.
ಜೊತೆಗೆ ಬಿಎಸ್‌ಪಿಯಿಂದ ಸಿ. ಎಸ್. ದ್ವಾರಕಾನಾಥ್, ಸಿಪಿಎಂನಿಂದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಸ್ಪರ್ಧಿಸುತ್ತಿರುವುದು ಕಾಂಗ್ರೆಸ್ ಪಾಲಿಗೆ ನಷ್ಟವಾದರೆ ಬಿಜೆಪಿ ಪಾಲಿಗೆ ವರವಾಗಿ ಪರಿಣಮಿಸಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಬಿಎಸ್‌ಪಿ ಮತ್ತು ಸಿಪಿಎಂಗೆ ಸಿಗುವ ಮತಗಳು ಕಾಂಗ್ರೆಸ್ಸಿನವೇ ಆಗಿರುವುದರಿಂದ ಮೊಯ್ಲಿ ಪಾಲಿಗೆ ಸಮಸ್ಯೆ ತಂದೊಡ್ಡಲಿದೆ ಎಂಬುದು ಲೆಕ್ಕಾಚಾರ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...