ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ
ಮಂಗಳೂರು[ಮಾ.25]: ಬಿಜೆಪಿಯಿಂದ ಎರಡು ಬಾರಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಕಾಂಗ್ರೆಸ್‌ನಿಂದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮುಖಾಮುಖಿಯಾಗಲಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಎಸ್‌ಡಿಪಿಐ ತನ್ನ ಅಭ್ಯರ್ಥಿಯಾಗಿ ಪಕ್ಷದ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಅವರನ್ನು ಕಣಕ್ಕಿಳಿಸಿದೆ. ದ.ಕ. ಕ್ಷೇತ್ರದಲ್ಲಿ ಈ ಬಾರಿಯೂ ಕಾಂಗ್ರೆಸ್-ಬಿಜೆಪಿ ನೇರ ಹಣಾಹಣಿ ನಡೆಯುವುದು ಖಚಿತವಾದಂತಾಗಿದೆ. ನಳಿನ್ ಕುಮಾರ್ ಸ್ಪರ್ಧೆಗೆ ಆರಂಭದಲ್ಲಿ ಪಕ್ಷದಲ್ಲೇ ಅಪಸ್ವರ ಕೇಳಿಬಂದಿತ್ತು.
ಈಗ ಪರಿಸ್ಥಿತಿ ತಿಳಿಯಾದಂತಿದೆ. ಕಾಂಗ್ರೆಸ್‌ನ ಮಿಥುನ್ ರೈಗೂ ಹಲವು ಸವಾಲುಗಳು ಎದುರಾಗಿವೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...
