ಹಾವೇರಿ - ಗದಗ :  ಬಿಜೆಪಿಯಿಂದ ಸಂಸದ ಶಿವಕುಮಾರ ಉದಾಸಿ ಹಾಗೂ ಕಾಂಗ್ರೆಸ್‌ನಿಂದ ಮಾಜಿ ಶಾಸಕ ಡಿ.ಆರ್. ಪಾಟೀಲ ಅವರಿಗೆ ಟಿಕೆಟ್ ದೊರೆತಿದ್ದು, ನೇರ ಹಣಾಹಣಿಗೆ ಅಖಾಡ ಸಜ್ಜುಗೊಂಡಂತಾಗಿದೆ. 

ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಡಿ.ಆರ್. ಪಾಟೀಲ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿ ದ್ದಾರೆ. ಹಿಂದಿನ ಎರಡು ಲೋಕಸಭೆ ಚುನಾವಣೆ ಗಳಲ್ಲಿ ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾದ ಹಿನ್ನೆಲೆಯಲ್ಲಿ ಈ ಸಲ ಬಿಜೆಪಿ ಎದುರಿಸಲು ಪ್ರಬಲ ಸಮುದಾಯದ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ.

ಇದರಿಂದ ಈ ಚುನಾವಣೆಯಲ್ಲಿ ಇಬ್ಬರ ನಡುವೆ ನೇರ ಹಣಾಹಣಿಯನ್ನು ನಿರೀಕ್ಷಿಸಬಹುದಾಗಿದೆ.