ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ

ಶಿವಮೊಗ್ಗ : ಈ ಕ್ಷೇತ್ರದಲ್ಲಿ 2018 ರ ಉಪ ಚುನಾವಣೆಯಲ್ಲಿನ ಎದುರಾಳಿಗಳೇ ಪುನಃ ಮುಖಾಮುಖಿಯಾಗಿದ್ದಾರೆ. ಬಿಜೆಪಿಯಿಂದ ಕಳೆದ ಬಾರಿ ಗೆದ್ದಿದ್ದ ಬಿ.ವೈ. ರಾಘವೇಂದ್ರ ಪುನಃ ಟಿಕೆಟ್ ಪಡೆದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈತ್ರಿ ಕೂಟದಿಂದ ಜೆಡಿಎಸ್ ನ ಮಧುಬಂಗಾರಪ್ಪ ಸ್ಪರ್ಧಿಸಿದ್ದಾರೆ. ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಇಡೀ ರಾಜ್ಯ ಸರ್ಕಾರವೇ ಇಲ್ಲಿಗೆ ಬಂದು ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಲು ಸತತ ಯತ್ನ ನಡೆಸಿತಾದರೂ ಫಲಿಸಿರಲಿಲ್ಲ. 

ಡಿ.ಕೆ. ಶಿವಕುಮಾರ್ ಅವರಿಗೆ ಕ್ಷೇತ್ರದ ಚುನಾವಣೆ ಹೊಣೆ ನೀಡಿರುವುದು ಕುತೂಹಲ ಕೆರಳಿಸಿದೆ. ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಮೈತ್ರಿಪಕ್ಷಗಳಿವೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ