ನವದೆಹಲಿ[ಮಾ.22]: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ವಿಶ್ವಕಪ್ ಹೀರೋ ಗೌತಮ್ ಗಂಭೀರ್ ಕ್ರಿಕೆಟ್ ನಿವೃತ್ತಿ ಬಳಿಕ ಮತ್ತೊಂದು ಇನ್ನಿಂಗ್ಸ್ ಆರಂಭಿಸಿದ್ದು, ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಸಾಕಷ್ಟು ದಿನಗಳಿಂದ ಹರಡಿದ್ದ ಊಹಾಪೋಹಗಳಿಗೆ ಎಡಗೈ ಬ್ಯಾಟ್ಸ್’ಮನ್ ತೆರೆ ಎಳೆದಿದ್ದಾರೆ.

ಇಂದು ಬಿಜೆಪಿ ಕೇಂದ್ರ ಕಚೇರಿಗೆ ತೆರಳಿದ ಗಂಭೀರ್ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ರವಿಶಂಕರ್ ಪ್ರಸಾದ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಾತನಾಡಿದ ಡೆಲ್ಲಿ ಬ್ಯಾಟ್ಸ್’ಮನ್ ಗಂಭೀರ್, ಭಾರತದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ನಾನು ಪ್ರಭಾವಿತನಾಗಿದ್ದೇನೆ. ನಾವೆಲ್ಲ ಭಾರತವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟಲು ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವಕಪ್ ಹೀರೋ ಕಣಕ್ಕೆ?

ದೆಹಲಿಯ 7 ಲೋಕಸಭಾ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಗಂಭೀರ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.  

RCB ತಂಡಕ್ಕೆ ಕೊಹ್ಲಿ ಕೃತಜ್ಞರಾಗಿರಬೇಕು: ಗಂಭೀರ್ ಕೊಂಕು ನುಡಿ

2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಗಂಭೀರ್ ಮಹತ್ವದ ಪಾತ್ರವಹಿಸಿದ್ದರು. ಕಳೆದ ಡಿಸೆಂಬರ್’ನಲ್ಲಿ ಆಂಧ್ರ ವಿರುದ್ಧ ಕೊನೆಯ ರಣಜಿ ಪಂದ್ಯವನ್ನಾಡುವ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್’ಗೆ ವಿದಾಯ ಹೇಳಿದ್ದರು. ಕ್ರಿಕೆಟ್ ನಿವೃತ್ತಿಯ ಬಳಿಕ ಗಂಭೀರ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಗಾಳಿಸುದ್ದಿ ಹರಿದಾಡಿತ್ತು. 

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವಕಪ್ ಹೀರೋ ಕಣಕ್ಕೆ?

ನವಜೋತ್ ಸಿಂಗ್ ಸಿಧು, ಮೊಹಮ್ಮದ್ ಅಜರುದ್ದೀನ್ ಬಳಿಕ ಮತ್ತೋರ್ವ ಸ್ಟಾರ್ ಕ್ರಿಕೆಟಿಗ ಗಂಭೀರ್ ರಾಜಕೀಯ ಪ್ರವೇಶ ಮಾಡಿದಂತಾಗಿದೆ