ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ. ಇತ್ತ ಮಂಡ್ಯ ಲೋಕಸಭಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. 

ಇತ್ತ  ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಸಮಲತಾ ಬೆನ್ನಿಗೆ ನಿಂತ ನಟ ದರ್ಶನ್ ವಿರುದ್ಧ ಮತ್ತೆ ಸಿಎಂ ಕುಮಾರಸ್ವಾಮಿ ವಾಕ್ ಪ್ರಹಾರ ನಡೆಸಿದ್ದಾರೆ. ದರ್ಶನ್ ಬಿರುದು ಡಿ ಬಾಸ್ ಎನ್ನೋದು ನಾಲ್ಕೈದು ಜನ ನೀಡಿದ್ದು, ಅದೇನು 6 ಕೋಟಿ ಕನ್ನಡಿಗರು ನೀಡಿದ್ದಾ ಎಂದಿದ್ದು, ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. 

ಇದೇ ವೇಳೆ ತಮ್ಮ ಮಗನ ಬಿರುದಿನ ಬಗ್ಗೆಯೂ ಪ್ರಸ್ತಾಪಿಸಿದ ಕುಮಾರ ಸ್ವಾಮಿ,  ಈಗ ನನ್ನ ಮಗನಿಗೂ ಕೂಡ ಯುವರಾಜ ಎಂದು ಬಿರುದು ಕೊಟ್ಟಿದ್ದಾರೆ. ಅವನು ಈಗ ಯುವರಾಜನಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಅದನ್ನು ನಾಲ್ಕು ಜನ ನೀಡಿದ್ದು, ಅದನ್ನೇ ಇಟ್ಟುಕೊಂಡು ಮೆರೆಯೋಕೆ ಆಗುತ್ತಾ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಕುಮಾರಸ್ವಾಮಿ ಹೇಳಿಕೆಗೆ ದರ್ಶನ್ ಅಭಿಮಾನಿಗಳು ಟಾಂಗ್ ನೀಡಿದ್ದು, ನಿಮಗೆ ಮಣ್ಣಿನ ಮಕ್ಕಳು ಎಂದು ನೀವೇ ಕರೆದುಕೊಳ್ಳುತ್ತೀರಿ. ಇದನ್ನು ಕರ್ನಾಟಕ ಕೊಟ್ಟಿಲ್ಲ ಎಂದು ಕಾಲೆಳೆದಿದ್ದಾರೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ