ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗಾಂಧಿ ನಗರ ಟಿಕೆಟ್ ಅಡ್ವಾಣಿಗೆ ನೀಡದಿರುವುದರ ಸಂಬಂಧ ಕೂಡ ವಾಗ್ದಾಳಿ ನಡೆಸಿದ್ದಾರೆ. 

ನವದೆಹಲಿ : ಬಿಜೆಪಿ ಹಿರಿಯ ನಾಯಕ ಶತ್ರುಘ್ನ ಸಿನ್ಹಾಗೆ ಇದೀಗ ಪಾಟ್ನಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶತ್ರುಘ್ನಾ ಸಿನ್ಹಾ ಬದಲಿಗೆ ರವಿಶಂಕರ್ ಪ್ರಸಾದ್ ಗೆ ಟಿಕೆಟ್ ನೀಡಲಾಗಿದ್ದು, ಈ ನಿಟ್ಟಿನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಇನ್ನು ಗುಜರಾತ್ ಗಾಂಧಿ ನಗರ ಕ್ಷೇತ್ರದಿಂದ ಈ ಬಾರಿ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಬದಲಿಗೆ ಅಮಿತ್ ಶಾಗೆ ಟಿಕೆಟ್ ನೀಡಲಾಗಿದೆ. ಈ ಬಗ್ಗೆ ಶತ್ರಘ್ನ ಸಿನ್ಹಾ ವಾಗ್ದಾಳಿ ನಡೆಸಿದ್ದು, ಅವರೊಂದಿಗೆ ಎಂದಿಗೂ ಹೊಂದಾಣಿಕೆಯಾಗದ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ. ಇದೊಂದು ಉದ್ದೇಶ ಪೂರ್ವಕವಾಗಿ ಮಾಡಿದ ಕೆಲಸ ಎಂದು ಹೇಳಿದ್ದಾರೆ. 

6 ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ ವ್ಯಕ್ತಿಗೆ ಟಿಕೆಟ್ ಕೈ ತಪ್ಪಿದೆ ಎಂದು ಅಡ್ವಾಣಿಗೆ ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ