ಬೆಂಗಳೂರು: ಕಾಂಗ್ರೆಸ್‌ನ ಯಾವುದೇ ಮುಖಂಡರು, ಕಾರ್ಯಕರ್ತರು ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸುವುದಾದರೆ ಅವರು ಪಕ್ಷ ಬಿಟ್ಟು ಹೋಗಿ ಪ್ರಚಾರ ಮಾಡಲಿ. 

ಪಕ್ಷದಲ್ಲಿದ್ದು ಕೊಂಡು ಪಕ್ಷದ ಬಾವುಟ ಹಿಡಿದು ಅವರೊಂದಿಗೆ ಪ್ರಚಾರಕ್ಕೆ ಹೋದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿ, ಮುಖಂ ಡರು, ಕಾರ್ಯಕರ್ತರು ಸುಮಲತಾ ಪರ ಪ್ರಚಾರಕ್ಕೆ ಹೋಗುವುದಾಗಲಿ, ಆ ವೇಳೆ ಪಕ್ಷದ ಬಾವುಟ ಪ್ರದರ್ಶಿಸುವುದಾಗಲಿ ಮಾಡಬಾರದು ಎಂದು ಸೂಚಿಸಿದ್ದಾರೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರ