ಬೆಂಗಳೂರು : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಕ್ಕೆ ಇನ್ನೆರಡು ದಿನವಷ್ಟೇ ಬಾಕಿ ಉಳಿದಿದ್ದು, ಪಕ್ಷಗಳು ಕಾತರತೆಯಿಂದ ಕಾಯುತ್ತಿವೆ. 

ಇದೇ ಸಂದರ್ಭದಲ್ಲಿ ರಾಜ್ಯದ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಸಚಿವ ಡಿ.ಕೆ. ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಚುನಾವಣೆ ಫಲಿತಾಂಶ ದಿನದಂದೂ  ಡಿ.ಕೆ. ಶಿವಕುಮಾರ್ ವಿದೇಶದಲ್ಲಿಯೇ ಉಳಿದುಕೊಳ್ಳಲಿದ್ದಾರೆ. 

ಚುನಾವಣೆ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದು, ಆದರೆ ಈ ಸಂದರ್ಭದಲ್ಲಿ ರಾಜ್ಯದಲ್ಲಿರದೇ ಡಿಕೆಶಿ ವಿದೇಶದಲ್ಲಿರುವುದು ಶಾಸಕರನ್ನು ಉಳಿಸಿಕೊಳ್ಳುವ ಯತ್ನದಿಂದ ದೂರ ಉಳಿದರಾ ಎನ್ನುವ ಪ್ರಶ್ನೆ ಮೂಡಿದೆ. 

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಕುಟುಂಬಸ್ಥರೊಂದಿಗೆ ತೆರಳಿದ್ದು, ಇದರ ಹಿಂದಿನ ಉದ್ದೇಶವೇನು ಎನ್ನುವ ಪ್ರಶ್ನೆ ಉದ್ಭವವಾಗಿದೆ. 

ಇತ್ತ ಎಕ್ಸಿಟ್ ಪೋಲ್ ಬಳಿಕ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದು, ಡಿಕೆಶಿ ಸಂಪರ್ಕದಲ್ಲಿ ಇದ್ದ ನಾಗೇಂದ್ರ, ಕುಮಟಳ್ಳಿ ಅವರನ್ನ ಮತ್ತೆ ಸೆಳೆಯುವ ಪ್ರಯತ್ನ ಮಾಡುತ್ತಾರೆ ಎನ್ನಲಾಗುತ್ತಿದೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.