Asianet Suvarna News Asianet Suvarna News

ಮಂಡ್ಯ: ಕಾಂಗ್ರೆಸ್ ಮುಖಂಡನ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

ಲೋಕ ಅಖಾಡದಲ್ಲಿ ಕುರುಡು ಕಾಂಚಾಣದ ವಾಸನೆ ಬಂದ ಹಿನ್ನೆಲೆಯಲ್ಲಿ ಮಂಡ್ಯ ವಿಧಾನಸಭೆ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ನಿವಾಸ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ.

EC Officials raids On Mandya Congress Leader ravi ganiga House
Author
Bengaluru, First Published Apr 17, 2019, 9:54 PM IST

ಮಂಡ್ಯ, [ಏ.17]: ರಾಜ್ಯದಲ್ಲಿ ಲೋಕಸಭೆ ಮೊದಲ ಹಂತದ ಚುನಾವಣೆಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇರುವಾಗಲೇ ರಣ ರಣ  ಮಂಡ್ಯದಲ್ಲಿ ಇಂದು [ಬುಧವಾರ] ಸಹ ಚುನಾವಣಾಧಿಕಾರಿಗಳ ಬೇಟೆ ಮುಂದುವರೆದಿದೆ. 

2018ರ ಮಂಡ್ಯ ವಿಧಾನಸಭೆ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗಣಿಗ ರವಿಕುಮಾರ್ ನಿವಾಸ ಮೇಲೆ  ಚುನಾವಣಾಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದರು.

ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಮಂಡ್ಯದಲ್ಲಿ ಕುರುಡು ಕಾಂಚಾಣದ ಸದ್ದು ಜೋರಾಗಿ ಕೇಳಿಬರುತ್ತಿದೆ. ಇದ್ರಿಂದ ದಿನಗಳಿಂದ ಐಟಿ ಹಾಗೂ ಚುನಾವಣಾಧಿಕಾರಿಗಳು ಕಳೆದ 15 ದಿನದಿಂದ ಮಂಡ್ಯದಲ್ಲಿ ತೀವ್ರ ನಿಗಾ ವಹಿಸಿದ್ದು, ಅನುಮಾನ ಬಂದವರ ಮನೆ ಮೇಲೆ ದಾಳಿ ಮಾಡುತ್ತಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

Follow Us:
Download App:
  • android
  • ios