ನವದೆಹಲಿ(ಮೇ.12): ಪಶ್ಚಿಮ ಬಂಗಾಳದಲ್ಲಿ ತಮ್ಮ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ಕಣ್ಣೀರಿಟ್ಟಿದ್ದ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ವಿರುದ್ಧ ಎಫ್ಐಆರ್ ದಾಖಲಿಸಲು ಚುನಾವಣಾ ಆಯೋಗ ಸೂಚನೆ ನೀಡಿದೆ. 

ಘಟಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್, ಮತಗಟ್ಟೆಯೊಳಗೆ ತಮ್ಮ ಭದ್ರತಾ ಸಿಬ್ಬಂದಿ ಕರೆದೊಯ್ದಿಲ್ಲದೇ ಮತಗಟ್ಟೆಯ ವಿಡಿಯೋ ಮಾಡಲು ಮುಂದಾದರು ಎಂಬ ಆರೋಪ ಕೇಳಿ ಬಂದಿದೆ.

ಇದರಿಂದ ರೊಚ್ಚಿಗೆದ್ದ ಟಿಎಂಸಿ ಕಾರ್ಯಕರ್ತರು, ಭಾರತಿ ಘೋಷ್ ಅವರನ್ನು ಮತಗಟ್ಟೆಯಿಂದ ಹೊರಗೆಳೆದು ಹಲ್ಲೆಗೆ ಯತ್ನಿಸಿದ್ದರು. ಸದ್ಯ ಭಾರತಿ ಘೋಷ್ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಪ್ರತಿಯಾಗಿ ಎಫ್ಐಆರ್ ದಾಖಲಿಸಲು ಚುನಾವಣಾ ಆಯೋಗ ಸೂಚನೆ ನೀಡಿದೆ. 

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ