ನವದೆಹಲಿ(ಮೇ.07): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ, ಮತ್ತೆರಡು ಪ್ರಕರಣದಲ್ಲಿ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.

ಕಳೆದ ಏ. 9ರ ಕರ್ನಾಟಕದ ಚಿತ್ರದುರ್ಗದ ಭಾಷಣ ಮತ್ತು ಏ. 23ರ ಅಹ್ಮದಾಬಾದ್ ನಲ್ಲಿ ನಡೆದಿದ್ದ ರೋಡ್ ಶೋಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ದಾಖಲಾಗಿತ್ತು.

ಈ ಎರಡೂ ಪ್ರಕರಣಗಳ ವಿಚಾರಣೆ ನಡೆಸಿದ ಚುನಾವಣಾ ಆಯೋಗ, ಮೋದಿ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘಿಸುವ ಅಂಶಗಳಿಲ್ಲ ಎಂದು ಸ್ಪಷ್ಟಪಡಿಸಿದೆ. 

ಈ ಮೂಲಕ ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಪೈಕಿ ಒಟ್ಟು 8 ಪ್ರಕರಣಗಳಲ್ಲಿ ಕ್ಲೀನ್ ಚಿಟ್ ದೊರೆತಂತಾಗಿದ್ದು, ಇನ್ನೂ 2 ಪ್ರಕರಣಗಳ ವಿಚಾರಣೆ ಬಾಕಿ ಇದೆ.

ಲೋಕಸಭೆಗೆ ಸಂಬಂದಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ