ಹಾಸನ[ಮಾ. 30]  ಹಾಸನಕ್ಕೆ ಆಗಮಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸಕಲ ಮಾಹಿತಿ ಪಡೆದುಕೊಂಡಿದ್ದಾರೆ. ನೂತನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಪ್ರಾನ್ಸಿಸ್, ನಿರ್ಗಮಿತ ಜಿಲ್ಲಾಧಿಕಾರಿ ಅಕ್ರಂಪಾಷಾ, ಸೇರಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯ ಚುನಾವಣಾಧಿಕಾರಿ  ಚುನಾವಣಾ ಖರ್ಚು ವೆಚ್ಚ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಪ್ರಜ್ವಲ್ ರೇವಣ್ಣ ವಿರುದ್ಧ ಆದಾಯ ಮಾಹಿತಿ ಸಲ್ಲಿಕೆ ಲೋಪದ ಬಗ್ಗೆ ಬಿಜೆಪಿ ಅಭ್ಯರ್ಥಿ ಎ. ಮಂಜು ಆರೋಪ ಮಾಡಿದ್ದರು ಪ್ರಜ್ವಲ್  ಎರಡು ಕಂಪನಿಗಳಲ್ಲಿ ಪಾಲುದಾರಿಕೆ ಇದ್ದರೂ ಅಫಿಡಲಿಟ್ ನಲ್ಲಿ ನಮೂದಿಸಿಲ್ಲ ಎಂದು ದೂರು ನೀಡಿದ್ದರು. ಆದರೆ ಇದರ ವಿಚಾರಣೆ ನಡೆಸಿದ ಬಗ್ಗೆ ಯಾವುದೆ ಮಾಹಿತಿ ಲಭ್ಯವಾಗಿಲ್ಲ.