ನವದೆಹಲಿ(ಮೇ.12): ಲೋಕಸಭೆಗೆ ಇಂದು 6ನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಷ್ಟ್ರ ರಾಜಧಾನಿ ಸೇರಿದಂತೆ ಒಟ್ಟು 7 ರಾಜ್ಯಗಳ 59 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ನವದೆಹಲಿಯಲ್ಲಿ ಇಂದು ಹಲವಾರು ಗಣ್ಯರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ತಮ್ಮ ಮತದಾನದ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವವನ್ನು ಬಲಗೊಳಿಸಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರಪತಿ ಭವನದಲ್ಲಿ ತಮ್ಮ ಮತ ಚಲಾಯಿಸಿದರು.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ನಿರ್ಮಾಣ ಭವನ್ ಬಳಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಪೂರ್ವ ಉತ್ತರಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಲೋದಿ ಎಸ್ಟೇಟ್ ಬಳಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ ವೇಳೆ ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ ಕೂಡ ಮತ ಚಲಾಯಿಸಿದರು.

ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಔರಂಗ್‌ಜೇಬ್ ಲೇನ್ ಬಳಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿವಿಲ್ ಲೈನ್ ಬಳಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಕೂಡ ಮತದಾನ ಮಾಡಿ ಗಮನ ಸೆಳೆದರು.

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗುರುಗ್ರಾಮ್ ಬಳಿಯ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಇನ್ನು ಸಂತ್ ಗರ್ ಮತಗಟ್ಟೆಯಲ್ಲಿ 111 ವರ್ಷದ ಬಚ್ಚನ್ ಸಿಂಗ್ ಮತದಾನ ಮಾಡಿದರು. ಇವರು ದೆಹಲಿಯ ಅತ್ಯಂತ ಹಿರಿಯ ಮತದಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

12 ಗಂಟೆವರೆಗೂ ಶೇ. 25.13ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಲೋಕಸಭೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ