ಕಾಗವಾಡ[ಏ.17]: ಕುಮಾರಸ್ವಾಮಿ ನೂರು ಬಾರಿ ಮೈ ತೊಳೆದರೂ ಬೆಳ್ಳಗಾಗುವುದಿಲ್ಲ. ಎಮ್ಮೆಯಂತೆ ಕಾಣಿಸಿಕೊಳ್ಳುತ್ತೀರಿ ಎಂದು ಮಾಜಿ ಶಾಸಕ ರಾಜು ಕಾಗೆ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಮೋದಿ 10 ಬಾರಿ ಮೇಕಪ್‌ ಮಾಡಿಕೊಂಡು ಕ್ಯಾಮೆರಾ ಮುಂದೆ ಬರ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದಕ್ಕೆ ಕಾಗವಾಡದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಾಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನರೇಂದ್ರ ಮೋದಿ ಸುಂದರ, ಚಂದ, ಮತ್ತು ಬೆಳ್ಳಗಿದ್ದಾರೆ, ಕುಮಾರಸ್ವಾಮಿಯವರೇ ನಿನ್ನ ನೂರು ಬಾರಿ ಮೈ ತೊಳೆದರೂ ನೀನು ಬೆಳ್ಳಗೊಗೊಲ್ಲ ಎಂದರು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.