Asianet Suvarna News Asianet Suvarna News

ಮಂಡ್ಯದಲ್ಲಿ ಹಣದ ಮಾತು:ಮೈತ್ರಿ ನಾಯಕರ ವಿರುದ್ಧ ದೂರು ದಾಖಲು

ಮಂಡ್ಯ ಲೋಕಸಭಾ ಕಣದಲ್ಲಿ ಆರೋಪ-ಪ್ರತ್ಯಾರೋದ ನಡುವೆ ಕುರುಡು ಕಾಂಚಾಣ ಹರಿದಾಡುತ್ತಿದೆ. ಇತ್ತೀಚೆಗಷ್ಟೇ ಸಚಿವ ಹಾಗು ಕಾಂಗ್ರೆಸ್ ಹಿರಿಯ ನಾಯಕ ನಡುವಿನ ಫೋನ್ ಸಂಬಾಷಣೆ ಸಾಕ್ಷಿಯಾಗಿದ್ದು, ಈಗ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ.

FIR Registered Against CS Puttaraju And Madegowda Over Money for Mandya Poll
Author
Bengaluru, First Published Apr 10, 2019, 6:13 PM IST

ಮಂಡ್ಯ, [ಏ.10]: ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ.ಮಾದೇಗೌಡ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಚುನಾವಣಾ ಖರ್ಚಿಗಾಗಿ ಹಣದ ಬೇಡಿಕೆ ಇಟ್ಟಿದ್ದ ಸಂಬಂಧ ಚುನಾವಣಾಧಿಕಾರಿ ಜಗದೀಶ್ ದೂರು ಆಧರಿಸಿ ಐಪಿಸಿ ಸೆಕ್ಷನ್ 171(ಇ)ರ ಅಡಿಯಲ್ಲಿ ಎಫ್​ಐಆರ್​ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣವನ್ನು ಚುನಾವಣಾ ಆಯೋಗಕ್ಕೆ ವರ್ಗಾಯಿಸಿದ್ದಾರೆ.

ಮಂಡ್ಯದಲ್ಲಿ ಹಣದ ಮಾತು: JDS ಮಿನಿಸ್ಟರ್-ಮಾಜಿ ಸಂಸದ ಆಡಿಯೋ ವೈರಲ್..!

ಮಂಡ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿರುವ ಮಾದೇಗೌಡ ಅವರು ಪುಟ್ಟರಾಜುಗೆ ಫೋನ್ ಕರೆ ಮಾಡಿ ಕ್ಯಾಂಪೇನ್ ಗೆ ಹಣ ಕಳುಹಿಸಿ ಎಂದು ಹೇಳಿದ್ದರು.  ಅದಕ್ಕೆ ಸಚಿವರು ಹಣದ ವ್ಯವಸ್ಥೆ ಮಾಡುವುದಾಗಿ ಉತ್ತರಿಸಿದ್ದರು. 

ಈ ಆಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿದೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು RTI ಕಾರ್ಯಕರ್ತ ರವೀಂದ್ರ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು. ಇವರ ದೂರನ್ನು ಆಧರಿಸಿ ಚುನಾವಣಾಧಿಕಾರಿಗಳು ಮಂಡ್ಯ ಪಶ್ಚಿಮ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿದ್ದಾರೆ. 

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

Follow Us:
Download App:
  • android
  • ios