ಶಿಮ್ಲಾ, [ಮೇ.05]: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್​ ಠಾಕೂರ್​ ಅವರ ಪ್ರಚಾರದ ಸಮಾವೇಶಕ್ಕೆ ಹೋಗುತ್ತಿದ್ದ ಐವರು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್​ ಠಾಕೂರ್​ ಅವರು ಇಂದು ಭಟಕಿದರ್​ ಗ್ರಾಮದಲ್ಲಿ ಏರ್ಪಡಿಸಿದ್ದರು. ಈ ಸಭೆಗೆ ಕಾರಿನಲ್ಲಿ ಹೊರಟಿದ್ದ ಐವರು ಬಿಜೆಪಿ ಕಾರ್ಯಕರ್ತ ಪ್ರಯಾಣಿಸುತ್ತಿದ್ದ ಕಾರು ಮಂಡಿ ಜಿಲ್ಲೆಯ ಬಾಗಾ ಚಾನೋಗಿ ಬಳಿ 300 ಮೀಟರ್​ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು,  ಐವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಚಾಲಕ ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ, ಕಾಂಗ್ರಾ, ಹಮೀರ್ಪುರ್​, ಶಿಮ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಮೇ 19ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ.