ಮಂಡ್ಯ(ಮಾ.24): ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ನಯವಾಗಿ ನಿರಾಕರಿಸಿದ್ದಾರೆ.

ನಿಖಿಲ್ ಪರ ಪ್ರಚಾರ ಮಾಡುವಂತೆ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಮಾಡಿದ ಮನವಿಯನ್ನು ನಯವಾಗಿ ತಿರಸ್ಕರಿಸಿರುವ ಸಿದ್ದರಾಮಯ್ಯ, ದೇವೇಗೌಡರೊಂದಿಗೆ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದಾರೆ. ಈ ಮೂಲಕ ವೈಯಕ್ತಿಕವಾಗಿ ಪ್ರಚಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

"

ನಿಖಿಲ್ ಕುಮಾರಸ್ವಾಮಿ ನಾಳೆ(25-03-2019) ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಸಿದ್ದರಾಮಯ್ಯ ಗೈರು ಹಾಜರಾಗಲಿದ್ದಾರೆ. ನಾಳೆ ಚಿತ್ರದುರ್ಗದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದು, ಅಲ್ಲಿಗೇ ಹೋಗಬೇಕಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.