ಮಲ್ಲಿಕಾರ್ಜುನ ಖರ್ಗೆಗೆ ಶಾಕ್, ಮತ್ತೋರ್ವ ಕಾಂಗ್ರೆಸ್ ಸೀನಿಯರ್ ಲೀಡರ್ ಬಿಜೆಪಿಗೆ
ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ. ಅದರಲ್ಲೂ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕರು ಒಬ್ಬೊಬ್ಬರಗಿಯೇ ಪಕ್ಷ ತೊರೆಯುತ್ತಿದ್ದಾರೆ.
ಬೆಂಗಳೂರು, [ಮಾ.22]: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಸೋಲಿಲ್ಲ ಸರದಾರ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿರ್ಜುನ ಖರ್ಗೆ ವಿರುದ್ಧ ಈ ಬಾರಿ ಕ್ಷೇತ್ರದಲ್ಲಿ ವಿರೋಧದ ಅಲೆ ಎದ್ದಿದೆ.
SC ಮೀಸಲು ಕ್ಷೇತ್ರ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಪರ ಅಲೆ ಜೋರಾಗಿದೆ.
ಕೈಪಡೆಯಲ್ಲಿ ಅಲ್ಲೋಲ ಕಲ್ಲೋಲ; ಸೋಲಿಲ್ಲದ ಸರದಾರನ ಕ್ಷೇತ್ರ ಚೇಂಜ್?
ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ನಾಯಕರು ಒಬ್ಬೊಬ್ಬರಾಗಿ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಸಚಿವ ವೈಜನಾಥ್ ಪಾಟೀಲ್ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಬೆನ್ನಲ್ಲೇ ಇದೀಗ ಮತ್ತೊಬ್ಬ ಹಿರಿಯ ಕಾಂಗ್ರೆಸ್ ನಾಯಕ ಪಕ್ಷ ತೊರೆದಿದ್ದಾರೆ.
ಮಾಜಿ ಸಚಿವ ಡಾ. ಎ.ಬಿ. ಮಾಲಕರೆಡ್ಡಿ ಅವರು ಇಂದು [ಶುಕ್ರವಾರ] ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು, ಖರ್ಗೆ ನಿದ್ದೆಗೆಡಿಸಿದೆ.
ಖರ್ಗೆಗೆ ಶಾಕ್ ಮೇಲೆ ಶಾಕ್, ಒಬ್ರು ಬಿಜೆಪಿಗೆ ಜೈ, ಇನ್ನೊಬ್ರು 'ಕೈ'ಗೆ ಗುಡ್ ಬೈ
ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ವ್ಯಮೋಹದಿಂದಲೇ ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡು ಪಕ್ಷ ತೊರೆಯುತ್ತಿದ್ದಾರೆ ಎನ್ನುವುದು ಕ್ಷೇತ್ರದ ಜನರ ಅಭಿಪ್ರಾಯ.
ಬಿಜೆಪಿ ಅಭ್ಯರ್ಥಿಯಾಗಿರುವ ಉಮೇಶ್ ಜಾಧವ್ ಕೂಡ ಇದೇ ಕಾರಣಕ್ಕೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದರು. ಈಗಾಗಲೇ ಮಾಲಿಕಯ್ಯ ಗುತ್ತೇದಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಅಷ್ಟೇ ಶಹಬಾದ್ ನಗರಸಭೆ ಜೆಡಿಎಸ್ ಸದಸ್ಯರೊಬ್ಬರು ಬಿಜೆಪಿ ಸೇರಿರುವುದನ್ನು ಇಲ್ಲಿ ಸ್ಮರಿಸಬಹುದು.
ಹೀಗೆ ಒಬ್ಬರಿಂದೊಬ್ಬರು ಕಾಂಗ್ರೆಸ್ ತೊರೆಯುತ್ತಿರುವುದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೊಲಿನ ಭೀತಿ ಎದುರಾಗಿದಂತೂ ನಿಜ. ಮತ್ತೊಂದೆಡೆ ಬಿಜೆಪಿ ಸಹ ಕಾಂಗ್ರೆಸ್ ರೆಬೆಲ್ ನಾಯಕರನ್ನು ಪಕ್ಷಕ್ಕೆ ಕರೆತಂದು ಶತಾಯಗತಾಯವಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ನಾನಾ ತಂತ್ರಗಳನ್ನು ರೂಪಿಸುತ್ತಿದೆ.