ಅಹಮದಾಬಾದ್(ಮೇ.23): ಈ ಬಾರಿ ಶತಾಯಗತಾಯ ಗುಜರಾತ್‌ನಲ್ಲಿ ಬಿಜೆಪಿ ಪ್ರಭಾವ ಕುಗ್ಗಿಸಿ, ಮೋದಿಗೆ ಶಾಕ್ ನೀಡಲು ಸಲು ಸಿದ್ಧತೆ ನಡೆಸಿದ್ದ ಕಾಂಗ್ರೆಸ್‌ಗೆ ಈ ಬಾರಿಯೂ ತೀವ್ರ ನಿರಾಸೆ ಎದುರಾಗಿದೆ.

ಕಳೆದ(2014) ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 26 ಸ್ಥಾನ ಗಳಿಸಿದ್ದ ಬಿಜೆಪಿ, ಈ ಬಾರಿಯೂ ಅದನ್ನೇ ಪುನರಾವರ್ತಿಸುವ ಸಾಧ್ಯತೆ ದಟ್ಟವಾಗಿದೆ. ಕಳೆದ ಬಾರಿ ಒಂದೇ ಒಂದು ಸ್ಥಾನ ಗಳಿಸಲು ಶಕ್ತವಾಗದ ಕಾಂಗ್ರೆಸ್ ಈ ಬಾರಿ ಕೇವಲ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದು, ಒಂದು ಸ್ಥಾನ ಗೆದ್ದರೆ ಅದೇ ಹೆಚ್ಚು ಎಂದು ಅಂದಾಜಿಸಲಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲಿ ಮೋಧಿ ತವರು ರಾಜ್ಯದಲ್ಲಿ ಯಾವುದೇ ಮ್ಯಾಜಿಕ್ ಮಾಡಲು ಸಾಧ್ಯವಾಗಿಲ್ಲ ಎಂಬುದು ಖಚಿತ.