ಅಹಮದಾಬದ್(ಮಾ.29): ಮಹತ್ವದ ಬೆಳವಣಿಗೆಯೊಂದರಲ್ಲಿ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಹಾರ್ದಿಕ್ ಪಟೇಲ್ ಕನಸು ಬಹುತೇಕ ಭಗ್ನಗೊಂಡಿದೆ.

2015 ರಲ್ಲಿ ಮೆಹ್ಸಾನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆಯುಂಟಾಗಿದೆ. 

ಮೆಹ್ಸಾನ್ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಹಾರ್ದಿಕ್ ಪಟೇಲ್, ತೀರ್ಪಿಗೆ ತಡೆ ನೀಡಬೇಕೆಂದು ಕೋರಿ ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. 

1951 ರ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಹಾರ್ದಿಕ್ ಪಟೇಲ್ ವಿರುದ್ಧದ ಆರೋಪ ಸಾಬೀತಾಗಿದ್ದು, ಅಪರಾಧಿಯಾಗಿರುವ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಸಾಧ್ಯವಾಗುವುದಿಲ್ಲ.