ಅಹಮದಾಬಾದ್(ಮಾ.16): ಅಪರಿಚಿತ ವ್ಯಕ್ತಿಗಳು ಗುಜರಾತ್ ಕಾಂಗ್ರೆಸ್ ವೆಬ್‌ಸೈಟ್ ಹ್ಯಾಕ್ ಮಾಡಿದ್ದು, ಇತ್ತೀಚಿಗಷ್ಟೇ ಕಾಂಗ್ರೆಸ್ ಸೇರಿರುವ ಹಾರ್ದಿಕ್ ಪಟೇಲ್ ಅವರದ್ದು ಎಂದು ಹೇಳಲಾದ ಅಶ್ಲೀಲ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿರುಗಾಳಿ ಎಬ್ಬಿಸಿದ್ದ ಅಶ್ಲೀಲ ವಿಡಿಯೋ ಇದಾಗಿದ್ದು, ಈ ವಿಡಿಯೋದಲ್ಲಿ ಹಾರ್ದಿಕ್ ಪಟೇಲ್ ಮಹಿಳೆಯೊಂದಿಗೆ ಬೆಡ್‍ರೂಮ್‌ನಲ್ಲಿ ಕಾಣಿಸಿಕೊಂಡಿದ್ದರು.

ಈ ವಿಡಿಯೋವನ್ನು ಇದೀಗ ಕಾಂಗ್ರೆಸ್ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ‘ವೆಲ್ ಕಮ್ ಟು ಅವರ್ ನ್ಯೂ ಲೀಡರ್’ ಎಂದು ಬರೆಯಲಾಗಿದೆ.

ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸೇರಿರುವುದನ್ನು ಸಹಿಸದವರಿಂದ ಈ ಕೃತ್ಯ ಮಾಡಿರುವ ಸಾಧ್ಯತೆ ಇದ್ದು, ಪೊಲೀಸರಿಗೆ ದೂರು ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಇದೇ ಏಪ್ರಿಲ್ 11ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭೆಗೆ ದೇಶಾದ್ಯಂತ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು ಏಪ್ರಿಲ್ 23ರಂದು ಒಟ್ಟು ಎರಡು ಹಂತಗಳಲ್ಲಿ ಚುನಾವಣೆ ಘೋಷಣೆಯಾಗಿದೆ. ಮೇ 23 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಣೆಯಾಗಲಿದೆ.