ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯೊಂದರಲ್ಲಿ ಹಾಸನ ಬಿಜೆಪಿ ಅಧ್ಯಕ್ಷ ಯೋಗಾ ರಮೇಶ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಸಂಚಲನ ಮೂಡಿಸಿದೆ.

ಬೆಂಗಳೂರು, [ಮಾ.19] ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರಿದ ಬೆನ್ನಲ್ಲೇ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಯೋಗ ರಮೇಶ್ ಕಾಂಗ್ರೆಸ್ ಶಾಸಕಾಂಗ‌ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. 

ಇಂದು [ಮಂಗಳವಾರ] ಕಾವೇರಿ ನಿವಾಸಕ್ಕೆ ಆಗಮಿಸಿದ ಯೋಗ ರಮೇಶ್, ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ಮೂಲಕ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎನ್ನಲಾಗಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಇದೆ.

Scroll to load tweet…

ಈಗಾಗಲೇ ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದ ಮಾಜಿ ಸಚಿವ ಎ.ಮಂಜು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೇ, ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.

ಮಂಜು ಬಿಜೆಪಿ ಸೇರ್ಪಡೆಯಿಂದ ಅಸಮಾಧಾನಗೊಂಡಿರುವ ಯೋಗ ರಮೇಶ್ ಕಾಂಗ್ರೆಸ್ ಸೇರುವುದು ಖಚಿತವಾಗಿದ್ದು, ಈ ಬಗ್ಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದರು.