"

ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಫುಲ್ ಡಿಮ್ಯಾಂಡ್ ಬಂದಿದೆ. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರ ಅಸಮಾಧಾನ ಬಗೆಹರಿಸುವಂತೆ ಜೆಡಿಎಸ್ ನಾಯರು ಸಿದ್ದರಾಮಯ್ಯ ಅವರ ಮೊರೆ ಹೋಗುತ್ತಿದ್ದಾರೆ. ಮೊನ್ನೇ ಅಷ್ಟೇ ಸಚಿವ ಎಚ್.ಡಿ.ರೇವಣ್ಣ ಅವರು ಸಿದ್ದು ಭೇಟಿ ಮಾಡಿ  ಹಾಸನದಲ್ಲಿ ಕೈ  ಕಾರ್ಯಕರ್ತರ ಅಸಮಾಧಾನ ತಣಿಸಿ,ತಮ್ಮ ಪುತ್ರನ ಗೆಲುವಿಗೆ ನೆರವಾಗಿ ಎಂದು ಮನವಿ ಮಾಡಿದ್ದರು. ಇದೀಗ ಸ್ವತಃ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ಷೇತ್ರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.