ಹಾಸನದ ನೂತನ ಸಂಸದ ಪ್ರಜ್ವಲ್ ರೇವಣ್ಣ ರಾಜೀನಾಮೆಗೆ ನಿರ್ಧಾರ!
ಪ್ರಜ್ವಲ್ ರೇವಣ್ಣ ರಾಜೀನಾಮೆಗೆ ನಿರ್ಧಾರ| ಹಾಸನದಲ್ಲಿ ನೂತನ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ| ದೇವೇಗೌಡರು ಸೋತಿರುವುದಕ್ಕೆ ನನಗೆ ನೋವಾಗಿದೆ| ಹೋರಾಟವೇ ಜೀವನ ಎಂದುಕೊಂಡಿದ್ದ ಗೌಡರಿಗೆ ಸೋಲಾಗಿದೆ| ನಾನು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ
ಹಾಸನ[ಮೇ.24]: ಸಂಸದರಾಗಿ ಆಯ್ಕೆಯಾದ ಬಳಿಕ ಪ್ರಜ್ವಲ್ ರೇವಣ್ಣ ಮೊದಲ ಸುದ್ದಿಗೋಷ್ಟಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಜ್ವಲ್ ರೇವಣ್ಣ ರಾಜೀನಾಮೆ ವಿಚಾರವಾಗಿ ಮಾತನಾಡಿದ್ದಾರೆ.
ರಾಜೀನಾಮೆ ವಿಚಾರ ಪ್ರಸ್ತಾಪಿಸದ ಪ್ರಜ್ವಲ್ ರೇವಣ್ಣ ದೇವೇಗೌಡರು ಸೋತಿರುವುದಕ್ಕೆ ನನಗೆ ನೋವಾಗಿದೆ. ಹೋರಾಟವೇ ಜೀವನ ಎಂದುಕೊಂಡಿದ್ದ ಗೌಡರಿಗೆ ಸೋಲಾಗಿದೆ. ನಾನು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಮತ್ತೆ ದೇವೇಗೌಡರಿಗೆ ಶಕ್ತಿ ತುಂಬುವುದು ನನ್ನ ಉದ್ದೇಶ. ಹಾಸನ ಜಿಲ್ಲೆಯ ಜನರು ತಪ್ಪು ತಿಳಿಯಬಾರದು. ನಾನು ರಾತ್ರಿ ಇಡೀ ಚಿಂತಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ. ರಾಜೀನಾಮೆ ಬಗ್ಗೆ ಯಾರೊಂದಿಗೂ ಚರ್ಚೆ ಮಾಡಿಲ್ಲ ಇದು ನನ್ನ ಮನಸ್ಸಿನ ನಿರ್ಧಾರ ಎಂದಿದ್ದಾರೆ.
"
ಕಾರ್ಯಕರ್ತರು ಹಾಗೂ ಮೈತ್ರಿ ಪಕ್ಷಕ್ಕೆ ಧನ್ಯವಾದ ತಿಳಿಸಿದ ಪ್ರಜ್ವಲ್ 'ಜೆಡಿಎಸ್ ಪಾಳೆಯದಲ್ಲಿ ಒಂದೆಡೆ ಸಂತೋಷ, ಮತ್ತೊಂದೆಡೆ ಬೇಸರ ಇದೆ. ಜಿಲ್ಲೆಯ ಜನರು ನನ್ನ ಗೆಲ್ಲಿಸಿರುವುದಕ್ಕೆ ಪ್ರತಿಯೊಬ್ಬರಿಗೂ ಕೃತಜ್ಞತೆಗಳು. ಜೆಡಿಎಸ್ ಕಾಂಗ್ರೆಸ್ ನ ಎಲ್ಲರೂ ನಮಗೆ ಶಕ್ತಿ ತುಂಬಿದ್ದಾರೆ. ಅವರಿಗೂ ಧನ್ಯವಾದ ಹೇಳುವೆ. ಇದು ಪ್ರಜ್ವಲ್ ರೇವಣ್ಣ ಗೆಲುವಲ್ಲ ಉಭಯ ಪಕ್ಷಗಳ ಕಾರ್ಯಕರ್ತರು ಹೋರಾಟ ಮಾಡಿ ಗೆಲ್ಲಿಸಿದ್ದಾರೆ. ಇದು ಕಾರ್ಯಕರ್ತರು ಮತ್ತು ದೇವೇಗೌಡರ ಗೆಲುವು. ದೇವೇಗೌಡರು ಸೋತಿರುವುದಕ್ಕೆ ದುಃಖ ಆಗುತ್ತಿದೆ. ಹೋರಾಟವೇ ಜೀವನ ಎಂದುಕೊಂಡಿದ್ದ ಗೌಡರಿಗೆ ಆಕಸ್ಮಿಕ ಸೋಲಾಗಿದೆ. ತುಮಕೂರಿಗೆ ಹೇಮಾವತಿ ನೀರು ಕೊಟ್ಟಿದ್ದು ದೇವೇಗೌಡರು, ಆದರೂ ಕೆಲ ವಿರೋಧಿಗಳು ಅಪಪ್ರಚಾರ ಮಾಡಿದರು' ಎಂದು ಬೇಸರ ವ್ಯಕ್ತಪಡಿಸಿದ್ದಾರೆ