ಹುಬ್ಬಳ್ಳಿ, (ಏ.21): ಈ ಚುನಾವಣೆಯಲ್ಲಿ ದೇವೇಗೌಡರ ಸೋಲು ಖಚಿತ ಎಂದು ಬಿಜೆಪಿ ಶಾಸಕ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರಿಗೆ ತುಮಕೂರಿನ ಜನ ತಕ್ಕ ಪಾಠ ಕಲಿಸಲಿದ್ದಾರೆ. ಈ ಚುನಾವಣೆಯಲ್ಲಿ ಅವರಿಗೆ ಸೋಲು ಖಚಿತ ಎಂದರು.

ಕುಮಾರಸ್ವಾಮಿಯವರು ತಮ್ಮ ಮಗನ ಭವಿಷ್ಯದ ಬಗ್ಗೆಯೇ ಚಿಂತನೆಯಲ್ಲಿದ್ದಾರೆ ವಿನಃ ರಾಜ್ಯದ ಸಮಸ್ಯೆಗಳ ಬಗ್ಗೆ ಗಮನಹರಿಸಲೇ ಇಲ್ಲ. .ಕುಮಾರಸ್ವಾಮಿಯವರಿಗೆ ತಾವು ರಾಜ್ಯದ ಮುಖ್ಯಮಂತ್ರಿ ಎಂಬ ಪರಿಜ್ಞಾನವಿದೆಯಾ ? ಮೈತ್ರಿ ಸರ್ಕಾರ ಅಲ್ಪಾಯಸ್ಸಿನ ಸರ್ಕಾರವಾಗಿದೆ. ಮೇ 23 ರ ನಂತರ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಜಾತ್ಯಾತೀತ ಪಕ್ಷವಾ ಅಥವಾ ಜಾತಿ ರಹಿತ ಪಕ್ಷವಾ ಅನ್ನೋದು ಗೊತ್ತಾಗ್ತಿಲ್ಲ. ರಾಜ್ಯದಲ್ಲಿ ಈ ಭಾರಿ ಮೋದಿ ಅಲೆ ಹೆಚ್ಚಾಗಿದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ನರೇಂದ್ರ ಮೋದಿಯವರು ಭಾರತವನ್ನ ಅಗ್ರಗಣ್ಯ ರಾಷ್ಟ್ರವನ್ನಾಗಿ ಬದಲಾವಣೆಯತ್ತ ಕೊಂಡೊಯ್ಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.