ಬೆಂಗಳೂರು[ಮಾ.26]: ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆಗೆ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ಕೇಳಿದ್ದೇನೆ ಒಂದು ವೇಳೆ ಟಿಕೆಟ್‌ ಕೈ ತಪ್ಪಿದರೆ ಸಮುದಾಯದ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ಚರ್ಚಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಮಾಜಿ ಸಂಸದ ಎಚ್‌.ಟಿ.ಸಾಂಗ್ಲಿಯಾನ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ. ನನ್ನ ಸೇವೆ ಪರಿಗಣಿಸಿ ಟಿಕೆಟ್‌ ನೀಡುವಂತೆ ಈಗಾಗಲೇ ಪ್ರಿಯಾಂಕ ಗಾಂಧಿ ಅವರಿಗೆ ಮನವಿ ಮಾಡಿದ್ದೇನೆ. ರಾಜ್ಯದಲ್ಲಿ ಕ್ರಿಶ್ಚಿಯನ್‌ ಸಮುದಾಯ ಮುಖಂಡರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡಿಲ್ಲ. ಸಮುದಾಯ ಅಭಿವೃದ್ಧಿಯಾಗಬೇಕಾದರೆ ರಾಜಕೀಯ ಕ್ಷೇತ್ರದಲ್ಲಿಯೂ ಕ್ರಿಶ್ಚಿಯನ್ನರು ಇರಬೇಕು. ಆದ್ದರಿಂದ ಟಿಕೆಟ್‌ ಕೇಳಿದ್ದೇನೆ. ಒಂದು ವೇಳೆ ಟಿಕೆಟ್‌ ಕೈ ತಪ್ಪಿಸದರೆ, ಬೆಂಬಲಿಗರ ಜೊತೆ ಚರ್ಚಿಸಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬೇಕಾ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಕ್ರಿಶ್ಚಿಯನ್‌ ಸೋಷಿಯಲ್‌ ವೆಲ್‌ಫೇರ್‌ ಅಸೋಸಿಯೇಷನ್‌ ಅಧ್ಯಕ್ಷ ಹ್ಯಾರಿ ಡಿಸೋಜಾ ಮಾತನಾಡಿ, ರಾಜ್ಯದ ಬಹುತೇಕ ಕ್ರಿಶ್ಚಿಯನ್‌ ಸಂಘಟನೆಗಳು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಾ ಬಂದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿಯೂ ಕ್ರಿಶ್ಚಿಯನ್‌ ಅಭ್ಯರ್ಥಿಗೆ ಟಿಕೆಟ್‌ ನೀಡದೆ ಸಮುದಾಯವನ್ನು ನಿರ್ಲಕ್ಷಿಸಿದೆ. ರಾಜ್ಯದಲ್ಲಿ 30 ಲಕ್ಷ ಕ್ರಿಶ್ಚಿಯನ್‌ ಮತಗಳಿದ್ದು ನಮ್ಮನ್ನು ಮತ ಬ್ಯಾಂಕ್‌ನಂತೆ ನೋಡುತ್ತಿದ್ದಾರೆ. ಸಾಂಗ್ಲಿಯಾನ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ