ಧಾರವಾಡ, [ಏ.01]: ಧಾರವಾಡ-ಹುಬ್ಬಳ್ಳಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿಲ್ಲ. ಆಗಲೇ ಕಾಂಗ್ರೆಸ್ ನ ಆಂತರಿಕ ಕಚ್ಚಾಟದಿಂದ ಬೇಸತ್ತು ಕೆಪಿಸಿಸಿ ವೈದ್ಯಕೀಯ ಘಟಕದ ಅಧ್ಯಕ್ಷ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ್ದಾರೆ.

ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಸ್ಪರ್ಧಿಸಿ ಸೋತಿದ್ದ ಮಹೇಶ್ ನಾಲವಾಡ ಲೋಕಸಭಾ ಎಲೆಕ್ಷನ್ ವೇಳೆ ಬಿಜೆಪಿ ಸೇರಿದ್ದು, ಕಾಂಗ್ರೆಸ್ ಭಾರೀ ಹಿನ್ನೆಡೆಯಾಗಿದೆ.

ಮಾ. 12 ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಡಾ.‌ಮಹೇಶ ನಾಲವಾಡ ಇದೇ ಏಪ್ರಿಲ್ 3ರಂದು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಪ್ರಭಾವಿ ಕಾಂಗ್ರೆಸ್ ಮುಖಂಡ ಎನ್ನಿಸಿಕೊಂಡಿರುವ ಮಹೇಶ್ ನಾಲವಾಡ, ಲೋಕಸಭಾ ಎಲೆಕ್ಷನ್ ನಲ್ಲಿ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗಿದೆ.