ತುಮಕೂರು: ಕಾಂಗ್ರೆಸ್‌ನಲ್ಲಿ ಎರಡು ಬಣ ಇದೆ. ಒಂದು ಸಿದ್ದರಾಮಯ್ಯ ಬಣ, ಮತ್ತೊಂದು ಪರಮೇಶ್ವರ್ ಬಣ. ನನ್ನದು ಸಿದ್ದರಾಮಯ್ಯ ಬಣವಾಗಿದ್ದು, ಬಡವರ ಪರ ಇರುವ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬುದು ನನ್ನ ಆಸೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮೇಶ್ವರ್ ಅವರ ಬಣದಲ್ಲಿ ಅವರೇ ಸಿಎಂ ಆಗಬೇಕೆಂಬ ಆಸೆ. ಆದರೆ, ರಾಜ್ಯದಲ್ಲಿ ಸಿದ್ದರಾಮಯ್ಯ  ಮುಖ್ಯಮಂತ್ರಿಯಾಗಬೇಕು. ಕೇಂದ್ರದಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಕಳೆದ ಒಂದು ವರ್ಷದಿಂದ ಪರಮೇಶ್ವರ್ ಯಾವ ಕೆಲಸವನ್ನೂ ಮಾಡಿಲ್ಲ. 

ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಿಲ್ಲ, ಮಿತ್ರರಿಲ್ಲ ಎಂದು ತಿಳಿಸಿದರು. ತುಮಕೂರು ಕ್ಷೇತ್ರದಲ್ಲಿ ದೇವೇಗೌಡರು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಹೈಕಮಾಂಡ್ ನಿರ್ದೇಶನದಂತೆ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಲಾಗುವುದು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ