ನವದೆಹಲಿ: ‘ನಾನು ಬಿಜೆಪಿ ಸೇರ್ಪಡೆಯಾಗುವುದಾಗಿ ಹರಿದಾಡುತ್ತಿರುವ ಸುದ್ದಿ ಬರೀ ಊಹಾಪೋಹದಿಂದ ಕೂಡಿದೆ’ ಎಂದು ಉತ್ತರಪ್ರದೇಶದ ಕಾಂಗ್ರೆಸ್‌ ಮುಖಂಡ ಜಿತಿನ್‌ ಪ್ರಸಾದ್‌ ಹೇಳಿದ್ದಾರೆ.

ಜಿತಿನ್‌ ಬಿಜೆಪಿ ಸೇರಲಿದ್ದಾರೆ ಎಂಬ ಮಾಧ್ಯಮ ವರದಿಗಳಿಗೆ ಉತ್ತರಿಸಿದ ಅವರು, ‘ಬರೀ ಊಹಾಪೋಹದ ಪ್ರಶ್ನೆಗಳಿಗೆ ನಾನು ಏಕೆ ಉತ್ತರಿಸಬೇಕು?’ ಎಂದು ಸುದ್ದಿಗಾರರಿಗೇ ಮರುಪ್ರಶ್ನೆ ಹಾಕಿದರು.

45 ವರ್ಷದ ಪ್ರಸಾದ ಅವರು ಯುಪಿಎ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದರು. ಅವರಿಗೆ ಉತ್ತರಪ್ರದೇಶದ ಧೌಹಾರ್ಹಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಲಭಿಸಿದೆ. ಆದರೆ ಕೆಲವು ವಿಷಯಗಳ ಬಗ್ಗೆ ಅವರು ಪಕ್ಷದಲ್ಲಿ ಅಸಮಾಧಾನ ಹೊಂದಿದ್ದು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. 2000ನೇ ಇಸವಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಎದುರು ನಿಂತು ಇವರ ತಂದೆ ಜಿತೇಂದ್ರ ಪ್ರಸಾದ್‌ ಸೋತಿದ್ದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ