ಇಸ್ಲಾಮಾಬಾದ್(ಮಾ.26): ಭಾರತದಿಂದ ಮತ್ತೊಮ್ಮೆ ಮಿಲಿಟರಿ ಕಾರ್ಯಾಚರಣೆ ಸಂಭವ ಹೆಚ್ಚು ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಇದಕ್ಕೂ ಮೊದಲು ಮತ ಗಳಿಕೆಗಾಗಿ ಮೋದಿ ಸರ್ಕಾರ ಮತ್ತೊಮ್ಮೆ ಪಾಕಿಸ್ತಾನದ ಮೇಲೆ ದಾಳಿ ಮಾಡಬಹುದು ಎಂದು ಇಮ್ರಾನ್ ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೂ ಭಾರತ-ಪಾಕ್ ಗಡಿಯಲ್ಲಿ ಉದ್ಭವಿಸಿರುವ ಉದ್ವಿಗ್ನತೆ ಮುಂದುವರೆಯಲಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಇದೇ ವೇಳೆ ಭಾರತದ ಸಂಭವನೀಯ ದಾಳಿಯನ್ನು ಎದುರಿಸಲು ಪಾಕಿಸ್ತಾನ ಸಿದ್ಧವಾಗಿದೆ ಎಂದು ಇಮ್ರಾನ್ ಸ್ಪಷ್ಟಪಡಿಸಿದ್ದಾರೆ.

ಚುನಾವಣೆ ಸುದ್ದಿಗಳು