ಬೆಂಗಳೂರು(ಮಾ.29): ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹಣಕಾಸು ವ್ಯವಸ್ಥೆಗಾಗಿ ರಾಜ್ಯ ಸರ್ಕಾರ ಟೆಂಡರ್ ಪ್ರಕ್ರಿಯೆ ಶುರು ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ.

"

ಚುನಾವಣಾ ವೆಚ್ಛಕ್ಕಾಗಿ ಹಣ ಹೊಂದಿಸಲು ತಮಗೆ ಬೇಕದವರಿಗೆ ರಾಜ್ಯ ಸರ್ಕಾರವೇ ಬೇಕಾಬಿಟ್ಟಿಯಾಗಿ ಟೆಂಡರ್ ಹಂಚಿಕೆ ಮಾಡುತ್ತಿದೆ ಎಂದು ಹೇಳಲಾಗಿದೆ.

ಬಿಡಿಎ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳ ಟೆಂಡರ್ ಕರೆಯಲಾಗಿದ್ದು, ಇದರಲ್ಲಿ ಸರ್ಕಾರ ತನಗೆ ಬೇಕಾದವರಿಗೆ ಮನಬಂದಂತೆ ಟೆಂಡರ್ ಪ್ರಕ್ರಿಯೆ ಹಂಚಿಕೆ ಮಾಡಿದೆ ಎನ್ನಲಾಗಿದೆ.

"

ಈ ಕುರಿತು ಐಟಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ರಾಜ್ಯ ಸರ್ಕಾರದ ಹಲವು ಇಲಾಖೆಗಳ ಟೆಂಡರ್ ಪ್ರಕ್ರಿಯೆ ಮೇಲೆ ನಿಗಾವಹಿಸಿದೆ ಎಂದು ಮೂಲಗಳು ತಿಳಿಸಿವೆ.