ಬಳ್ಳಾರಿ, [ಏ.09]: ಲೋಕಸಭಾ ಚುನಾವಣೆಯಲ್ಲಿ ಹಣದ ವಹಿವಾಟಿನ ಹಿನ್ನಲೆಯಲ್ಲಿ ರಾಜ್ಯದಲ್ಲಿ ಐಟಿ ದಾಳಿ ಮುಂದುವರಿದಿದೆ. ಇತ್ತೀಚೆಗೆ ಹಾಸನ, ಮಂಡ್ಯ, ಶಿವಮೊಗ್ಗ ಸೇರಿಂದತೆ ಹಲವೆಡೆ ಐಟಿ ದಾಳಿ ನಡೆದಿತ್ತು.

ಇಂದು [ಮಂಗಳವಾರ] ಗಣಿನಾಡು ಬಳ್ಳಾರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ನಗರದ ಮೋಕಾ ರಸ್ತೆಯಲ್ಲಿರುವ ನಕ್ಷತ್ರ  ಪಂಚತಾರಾ ಹೊಟೇಲ್ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಕರ್ನಾಟಕದ ಐಟಿ ದಾಳಿಯಲ್ಲಿ ಒಟ್ಟು ಸಿಕ್ಕ ಹಣ ಎಷ್ಟು?

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಹಾಗೂ ಅವರ ಬೆಂಬಲಿಗರು ಇದೇ ಹೊಟೇಲ್ ನಲ್ಲಿ ತಂಗಿದ್ದರು. ಈ ವೇಳೆ
 ಲಗ್ಗೆ ಇಟ್ಟ ಐಟಿ ಅಧಿಕಾರಿಗಳು ತಪಾಸಣೆ ಕಾರ್ಯ ನಡೆಸಿದ್ದಾರೆ.

ದೇವೇಂದ್ರಪ್ಪ ಕೋಣೆ ಮಾತ್ರವಲ್ಲದೇ ಕಾಂಗ್ರೆಸ್ ಮುಖಂಡರ ಹೆಸರಿನಲ್ಲಿ ಇರುವ ಕೋಣೆಗಳನ್ನು ಸಹ ಪರಿಶೀಲನೆ ನಡೆಸಿದ್ದಾರೆ.